ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇದೇ ಗುರುವಾರ ದಿನಾಂಕ 23 ರಂದು ಬೆಳಗಾವಿಯ ಕಾಂಗ್ರೇಸ್ ಭವನದಲ್ಲಿ ಸಾಯಂಕಾಲ 4 ಗಂಟೆಗೆ ನಿಗದಿಯಾಗಿದ್ದ ಕಾಂಗ್ರೇಸ್ ಪಕ್ಷ ಸೇರ್ಪಡೆ ಸಮಾರಂಭವು ಕೆಲ ಅನಿವಾರ್ಯ ಕಾರಣಗಳಿಂದ ಬದಲಾವಣೆಯಾಗಿ ನಾಳೆ ಅಂದರೆ ಮಂಗಳವಾರ ನಡೆಯಲಿದೆ.
ಈ ಕುರಿತು ರಾಜಕೀಯ ಧುರೀಣ ಅಶೋಕ ಪೂಜಾರಿ ಮಾಹಿತಿ ನೀಡಿದ್ದು, ನಾಳೆ ದಿನಾಂಕ 21ರಂದು ಸಾಯಂಕಾಲ 4 ಗಂಟೆಗೆ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದ್ದು, ನನ್ನ ಹಿತೈಸಿಗಳು, ಮುಖಂಡರುಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಅಧಿಕೃತವಾಗಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ, ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮತ್ತು ರಾಜ್ಯ ಮತ್ತು ಜಿಲ್ಲೆಯ ಹಿರಿಯ ಮುಖಂಡರುಗಳು, ಪದಾಧಿಕಾರಿಗಳ ಸಮ್ಮುಖದಲ್ಲಿ ಕಾಂಗ್ರೇಸ್ ಪಕ್ಷವನ್ನು ಅಧಿಕೃತವಾಗಿ ಸೇರುವುದಾಗಿ ತಿಳಿಸಿದ್ದಾರೆ.
ಕಾಂಗ್ರೇಸ್ ಪಕ್ಷವನ್ನು ಸೇರುವ ವಿಚಾರ ಕಳೆದ 1 ವರ್ಷದಿಂದ ಚರ್ಚೆಯಲ್ಲಿತ್ತು. ಬೆಳಗಾವಿಯ ಲೋಕಸಭೆಯ ಉಪಚುನಾವಣೆಗಿಂತಲೂ ಮುಂಚಿತವಾಗಿಯೇ ನನಗೆ ಕಾಂಗ್ರೇಸ್ ಪಕ್ಷದ ಪರವಾಗಿ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರು ಪಕ್ಷ ಸೇರಲು ಅಧಿಕೃತವಾಗಿ ಆಹ್ವಾನ ನೀಡಿದ್ದರು. ಅದಕ್ಕೆ ಪೂರಕವಾಗಿಯೇ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯನವರು ಹಾಗೂ ಪಕ್ಷದ ರಾಜ್ಯ ಘಟಕ ಮತ್ತು ಜಿಲ್ಲಾ ಘಟಕ ಸಹಮತ ವ್ಯಕ್ತಪಡಿಸಿದ್ದರು. ಅದರೆ ಕಾರಣಾಂತರಗಳಿಂದ ಕಾಂಗ್ರೇಸ್ ಪಕ್ಷ ಸೇರ್ಪಡೆ ವಿಳಂಬವಾಗಿದ್ದರೂ ಸಹ ಇತ್ತೀಚೆಗೆ ರಾಯಭಾಗದಲ್ಲಿ ವಿಧಾನ ಪರಿಷತ್ತಿನ ಚುನಾವಣಾ ಪ್ರಚಾರ ಸಭೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮನ್ನು ಅಧಿಕೃತವಾಗಿ ಕಾಂಗ್ರೇಸ್ ಪಕ್ಷ ಸೇರ್ಪಡೆಯ ಕುರಿತು ಪ್ರಕಟಿಸಿದ್ದರು. ಹಾಗೂ ಅದೇ ದಿನ ಸಾಯಂಕಾಲ ಕೆ.ಪಿ.ಸಿ.ಸಿ. ಅಧ್ಯಕ್ಷರು ಬೆಳಗಾವಿಯಲ್ಲಿ ತಮಗೆ ಕಾಂಗ್ರೇಸ್ ಪಕ್ಷ ಶಾಲು ಹೊದಿಸಿ ಅನೌಪಚಾರಿಕವಾಗಿ ಪಕ್ಷ ಸೇರ್ಪಡೆಯನ್ನು ದೃಢಿಕರಿಸಿದ್ದರು ಎಂದರು.
ತಮ್ಮನ್ನು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡಿಸಲು ವಿಶೇಷ ಪ್ರಯತ್ನ ಮಾಡಿದ ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡರಾದ ಮಾಜಿ ಶಾಸಕ ಅಶೋಕ ಪಟ್ಟಣ ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ ಅವರಿಗೆ ಕೃತಜ್ಞತಾಭಾವ ವ್ಯಕ್ತಪಡಿಸಿದರು.
ಎಂಇಎಸ್ ಪುಂಡರ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ