ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸೆ.23ರದು ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ 2 ವರ್ಷದ ಹೆಣ್ಣು ಮಗು ಪತ್ತೆಯಾಗಿದ್ದು, ಹೆಣ್ಣು ಮಗುವನ್ನು ದುಷ್ಕರ್ಮಿಗಳು ಗದ್ದೆಯಲ್ಲಿ ಬಿಸಾಕಿ ಹೋಗಿದ್ದರು.
ಸ್ಥಳೀಯರು ಹಾಗೂ ವಾಹನ ಸವಾರರು ಮಗುವನ್ನು ಕಂಡು ರಕ್ಷಿಸಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಹೆಣ್ಣು ಮಗುವಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ದೇಹದ ಮೇಲೆ ಸುಟ್ಟಗಾಯಗಳಾಗಿದ್ದು, ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.
ಮಗುವಿನ ದೇಹದ ಮೇಲೆಲ್ಲ ಕೇರುಬೀಜದಿಂದ ಸುಟ್ಟಿರುವ ಗಾಯಗಳಾಗಿದ್ದು, ಬೆನ್ನಿನ ಭಾಗದಲ್ಲೂ ಗಾಯಗಳಾಗಿವೆ. ಹುಣ್ಣಿಮೆಯ ಹಿಂದಿನ ದಿನ ದುಷ್ಕರ್ಮಿಗಳು ಈ ಕೃತ್ಯ ವೆಸಗಿರುವ ಅನುಮಾನವ್ಯಕ್ತವಾಗಿದ್ದು, ವಾಮಾಚಾರ ನಡೆಸಿ ಮಗುವನ್ನು ಬಲಿಕೊಡಲು ಯತ್ನಿಸಿದ್ದರೇ ಎಂಬ ಶಂಕೆ ಮೂಡಿದೆ. ಈ ಹಿನ್ನೆಲೆಯಲ್ಲಿ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಎತ್ತಿನ ಬಂಡಿ ಏರಿಬಂದು ಕಬ್ಬು ನಾಟಿ ಮಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ