
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಸಾಂಬ್ರಾ ಗ್ರಾಮದಲ್ಲಿ ನಡೆದ ಎಟಿಎಂ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಲು ಪ್ರತ್ಯೇಕ ಮೂರು ತಂಡಗಳನ್ನು ರಚನೆ ಮಾಡಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರು ತಿಳಿಸಿದ್ದಾರೆ.
ಕಳ್ಳತನ ನಡದ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಮೂವರು ಮುಸುಕುಧಾರಿಗಳು ಕಟರ್ ಉಪಯೋಗಿಸಿ ಕಳ್ಳತನ ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲು ಆರೋಪಿಗಳು ಸಿಸಿಟಿವಿ ಕ್ಯಾಮರಾಗೆ ಸ್ಪ್ರೇ ಮಾಡಿ ಬಂದ್ ಮಾಡಿದ್ದಾರೆ. ತಕ್ಷಣ ಬ್ಯಾಂಕ್ ಕಂಟ್ರೋಲ್ ರೂಮ್ ಗೆ ಮಾಹಿತಿ ಹೋಗಿದೆ. ಅವರು ನಮ್ಮ ಪೊಲೀಸರಿಗೆ ತಿಳಿಸಿದ್ದಾರೆ. ನಮ್ಮ ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಹಣ ಕಳ್ಳತನ ಮಾಡಿಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ. ಎಟಿಎಂಗೆ ಸೆಕ್ಯೂರಿಟಿ ಸಿಬ್ಬಂದಿ ಇರಲಿಲ್ಲ. ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗುವುದು. ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುತ್ತೇವ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ