Belagavi NewsBelgaum NewsKannada NewsKarnataka NewsLatest

*ಮೂರು ಪ್ರತ್ಯೇಕ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಅರೆಸ್ಟ್: 7 ಆಟೋ, ಕಾರು, ಬೈಕ್ ಜಪ್ತಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಯಮಕನಮರಡಿ, ಹೊಸೂರ, ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ₹1.50 ಲಕ್ಷಕ್ಕೂ ಅಧಿಕ ಮೌಲ್ಯದ ಏಳು ಆಟೋಗಳು ಹಾಗೂ ಕಳ್ಳತನಕ್ಕೆ ಬಳಸಿದ್ದ ಕಾರು ಮತ್ತು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Home add -Advt

ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಆಟೋ ಕಳ್ಳತನ ಪ್ರಕರಣಗಳ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ತನಿಖೆ ವೇಳೆ ದೊರೆತ ಸುಳಿವುಗಳ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಕಳ್ಳತನವಾಗಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಗೋಕಾಕ ತಾಲೂಕಿನ ಅಂಕಲಗಿಯ ಅಕ್ಷಯ ವಿರುಪಾಕ್ಷ ಕುಳಬರಗಿ (30) ಹಾಗೂ ಹುಕ್ಕೇರಿ ತಾಲೂಕಿನ ಬನ್ನಿಗಿಡದ ಸಿದ್ದಪ್ಪ ಯಲ್ಲಪ್ಪ ನಾಯಕ ( 27 ) ಬಂಧಿತ ಆರೋಪಿಗಳು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹಾಗೂ ಡಿವೈಎಸ್ಪಿ ಗೋಕಾಕ ಅವರ ನಿರ್ದೇಶನದಂತೆ, ಯಮಕನಮರಡಿ ಪೊಲೀಸ್ ನಿರೀಕ್ಷಕ ಜಾವೀದ್ ಮುಶಾಪುರಿ ಅವರ ಮಾರ್ಗದರ್ಶನದಲ್ಲಿ, ಪಿಎಸ್ಐ ಬಿ.ಕೆ. ಪಾಟೀಲ ಅವರ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿತು.

ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸ್ ಸಿಬ್ಬಂದಿ ಎಲ್.ಬಿ. ಹಮಾಣಿ, ಎಲ್.ಎಸ್. ದನದವರ್, ಪಿ.ಬಿ. ಗಾಡಿವಡ್ಡರ, ಬಿ.ವೈ. ಮುನ್ನಪ್ಪ ಹಾಗೂ ಇತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ಕಾರ್ಯಾಚರಣೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯ ಕಾರ್ಯವನ್ನು ಪ್ರಶಂಸಿಸಿದ್ದಾರೆ.

Related Articles

Back to top button