ಸಂಪುಟ ವಿಸ್ತರಣೆ ಗೊಂದಲಗಳಿಗೆ ಶೀಘ್ರವೇ ತೆರೆ: ಬಿ.ವೈ ವಿಜಯೇಂದ್ರ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಂಪುಟ ವಿಸ್ತರಣೆ ಬಗ್ಗೆ ಇರುವ ಎಲ್ಲ ಪ್ರಶ್ನೆಗಳಿಗೆ ಶೀಘ್ರದಲ್ಲೇ ಉತ್ತರ ಸಿಗಲಿದೆ. ಅತಿ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಆಗಲಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ ವೀಜಯೇಂದ್ರ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಾಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಸಮಾಧಾನ ಬಿಜೆಪಿಯಲ್ಲಿ ಇಲ್ಲ. ಸೋತವರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಬಿಜೆಪಿ ವರಿಷ್ಠರು ಹಾಗೂ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುತ್ತಾರೆ. ಡಿಸಿಎಂ ಸ್ಥಾನ ಇರಬೇಕೋ ಬೇಡವೋ ಎನ್ನುವುದರ ಬಗ್ಗೆಯೂ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡುತ್ತಾರೆ ಎಂದರು.

ಇದೇ ವೇಳೆ ಕೊಲೆ ಬೆದರಿಕೆ ಪತ್ರದ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಪದವಿಯಿಂದ ಇಳಿದ ಬಳಿಕ ಹಾಗೂ ಉಪ ಚುನಾವಣೆಯಲ್ಲಿ ಸೋತ ಬಳಿಕ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಈ ರೀತಿ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button