Belagavi NewsBelgaum NewsKannada NewsKarnataka NewsLatest
*ಗೋಡೆ ಕುಸಿತದಿಂದ ವ್ಯಕ್ತಿ ಸಾವು: ಸ್ಥಳಕ್ಕೆ ಧಾವಿಸಿ ಸಾಂತ್ವನ ಹೇಳಿದ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ಆಕಸ್ಮಿಕ ಗೋಡೆ ಕುಸಿತದಿಂದಾಗಿ ವ್ಯಕ್ತಿಯೋರ್ವರು ಮೃತರಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಥಳಕ್ಕೆ ಧಾವಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಬಡಾಲ ಅಂಕಲಗಿಯ ಚನ್ನಪ್ಪ ಕುರಬರ ಗೋಡೆ ಕುಸಿತದಿಂದಾಗಿ ಸ್ಥಳದಲ್ಲೇ ಮರಣಹೊಂದಿದ್ದಾರೆ. ಸುದ್ದಿ ತಿಳಿದ ತಕ್ಷಣ ಚನ್ನರಾಜ ಹಟ್ಟಿಹೊಳಿ ಅವರು ತಹಶಿಲ್ದಾರ ಬಸವರಾಜ ನಾಗರಾಳ, ಹಿರೇಬಾಗೇವಾಡಿ ಸಿಪಿಐ ಮತ್ತಿತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿದರು.

ಘಟನೆಯ ಸಂಪೂರ್ಣ ಮಾಹಿತಿ ಪಡೆದ ಅವರು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸರಕಾರದಿಂದ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ