Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ವರುಣಾರ್ಭಟಕ್ಕೆ ಕುಸಿದು ಬಿದ್ದ 3 ಮನೆಗಳು; 13 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಾದ್ಯಂತ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ವರುಣಾರ್ಭಟಕ್ಕೆ ಬೈಲಹೊಂಗಲದಲ್ಲಿ ಮೂರು ಮನೆಗಳು ಕುಸಿತಗೊಂಡಿವೆ.

ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಮೂರು ಮನೆಗಳು ಕುಸಿತಗೊಂಡಿದ್ದು, ಮನೆಯಲ್ಲಿದ್ದ 13 ಜನರಿಗೆ ಗಾಯಗಳಾಗಿವೆ. ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ.

Home add -Advt

ಭಾರಿ ಮಳೆಯಿಂದ ಮನೆ ಕುಸಿದು ಬಿದ್ದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈರಯ್ಯ ಪತ್ರಯ್ಯನವರ್, ಶಂಕ್ರಪ್ಪ, ಬಸವಣ್ಣ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದೆ.

ಸ್ಥಳಕ್ಕೆ ಬೈಲಹೊಂಗಲ ಎಸಿ, ಇಓ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button