Belagavi NewsBelgaum NewsKannada NewsKarnataka NewsLatest
*ಬೆಳಗಾವಿ: ಎಸಿ ಕಚೇರಿಯಲ್ಲಿ ಎಸ್‌ಡಿಸಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ ಮಂಜನಾಥ ಅಂಗಡಿ ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್‌ಕೆ ಗ್ರಾಮದ ರವಿ ಅಜ್ಜಿ, ಪಹಣಿ ಪತ್ರ ತಿದ್ದುಪಡಿ ಅರ್ಜಿ ಸಲ್ಲಿಸಿದ್ದರು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಾಯುಕ್ತ ಠಾಣೆಗೆ ರವಿ ಅಜ್ಜಿ ದೂರು ನೀಡಿದ್ದರು.
ಇದೀಗ ಮಂಜುನಾಥ, 60 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಎಸ್ಪಿ ಹಣಮತರಾಯ, ಡಿವೈಎಸ್‌ಪಿ ಬಿ.ಎಸ್. ಪಾಟೀಲ , ಪಿಎಸ್‌ಐ ಅನ್ನಪೂರ್ಣ ಹುಲಗೂರ ನೇತೃತ್ವದ ತಂಡ ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ