*ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆ ಬಸುರ್ತೆ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಾಕತಿ ಪೊಲೀಸರು ಬಂಧಿಸಿದ್ದಾರೆ. ಅಂಗನವಾಡಿ ಸಹಾಯಕಿ ಮೀರಾ ಮೋರೆ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಪ್ಪ ಎಂಬಾತನ ವಿರುದ್ಧ ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿ ಕಲ್ಲಪ್ಪ ಜ್ಯೋತಿಬಾ ಮೋರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಮುಂದುವರೆದಿದೆ. *ರಾಜ್ಯದ ಹಲವೆಡೆ ಅಕಾಲಿಕ ಮಳೆ; ಜನಜೀವನ ಅಸ್ತವ್ಯಸ್ಥ* … Continue reading *ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಅರೆಸ್ಟ್*