Karnataka News

*ಬೆಳಗಾವಿ ಸೇರಿದಂತೆ 8 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*

ಖಾನಾಪುರ ತಹಶಿಲ್ದಾರ್ ಮನೆ ಮೇಲೂ ರೇಡ್

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. 8 ಅಧಿಕರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಸಾರಿಗೆ ಇಲಕಹೆ ಜಂಟಿ ನಿರ್ದೇಶಕಿ ಶೋಭಾ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಆಡಳಿತ ವೈದ್ಯಾಧಿಕಾರಿ ದಾ.ಎಸ್.ಎನ್.ಉಮೇಶ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಬೀದರ್ ನಲ್ಲಿ ಸಣ್ಣ ನೀರಾವರಿ ಇಂಜಿನಿಯರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪುರ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರು ನಿವೃತ್ತ ಆರ್ ಟಿಒ ಅಧಿಕಾರಿ ಎಸ್.ರಾಜು ಸೇರಿದಂತೆ 8 ಅಧಿಕರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Related Articles

Back to top button