*ಭಗವದ್ಗೀತೆ ಮತ್ತು ಕಾನೂನು : ಶನಿವಾರ ವಿಚಾರ ಸಂಕಿರಣ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಭಗವದ್ಗೀತಾ ಅಭಿಯಾನ ಸಮಿತಿ ವತಿಯಿಂದ ಡಿಸೆಂಬರ್ 2ರಂದು ಭಗವದ್ಗೀತೆ ಮತ್ತು ಕಾನೂನು ವಿಚಾರ ಸಂಕಿರಣ ನಡೆಯಲಿದೆ.
ಬೆಳಗಾವಿಯ ಕೋರ್ಟ್ ಆವರಣದ ನ್ಯಾಯವಾದಿಗಳ ಸಮುದಾಯ ಭವನದಲ್ಲಿ ಡಿಸೆಂಬರ್ 2, ಶನಿವಾರ ಮಧ್ಯಾಹ್ನ 1:30ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ.
ಸೋಂದಾ ಸ್ವರ್ಣಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮತ್ತು ಬೆಳಗಾವಿಯ ರಾಮಕೃಷ್ಣ ಮಿಶನ್ ಆಶ್ರಮದ ಸ್ವಾಮಿ ಮೋಕ್ಷಾತ್ಮಾನಂದಜಿ ಮಹಾರಾಜ ಸಾನ್ನಿಧ್ಯ ವಹಿಸಲಿದ್ದಾರೆ.
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಶ್ರೀಶಾನಂದ ಅವರು ಭಾರತದ ಕಾನೂನಿನ ಅಂತ:ಸ್ಸತ್ವ ಮತ್ತು ಭಗವದ್ಗೀತೆಯ ಸಾರ ವಿಷಯದ ಬಗ್ಗೆ ಮಾತನಾಡಲಿದ್ದಾರೆ.
ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅರವಿಂದ್ ಎಸ್ ಪಾಶ್ಚಾಪುರೆ ಅವರು ಭಾರತದ ನ್ಯಾಯಾಂಗ ವ್ಯವಸ್ಥೆ, ಕಾನೂನು ಮತ್ತು ಭಗವದ್ಗೀತೆ ವಿಷಯದ ಬಗ್ಗೆ ಮಾತನಾಡಲಿದ್ದಾರೆ.
ಬೆಳಗಾವಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯಲಕ್ಷ್ಮೀ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ