
ಪ್ರಗತಿವಾಹಿನಿ ಸುದ್ದಿ: ಅಪರಿಚಿತ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಮುತ್ಯಾನಟ್ಟಿ ಬಳಿಯ ರಾಷ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿ ಗಲ್ಲಿಯ ಸಕ್ಷಮ್ ಪಾಟೀಲ್ (20) ಸಿದ್ಧಾರ್ಥ್ ಬಾಳು ಪಾಟೀಲ್ (23) ಮೃತ ಯುವಕರು. ಇಬ್ಬರೂ ಬೈಕ್ ನಲ್ಲಿ ಕಾಕತಿಯ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ರಸ್ತೆಗೆ ಅಪ್ಪಳಿಸಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ