Kannada NewsLatest

ಬೈಕ್ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಮೆಕ್ಯಾನಿಕ್; ಪೊಲೀಸರ ಬಲೆಗೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು 25 ವರ್ಷದ ಮೊಹ್ಮದಶಾಯಿದ ಅಬ್ದುಲಹಮೀದ ಮುಲ್ಲಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ಆರೋಪಿ ಬೆಳಗಾವಿ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಬಂಧಿತನಿಂದ ನಾಲ್ಕು ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

Home add -Advt

ಎಪಿಎಂಸಿ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ ಹಿರೇಮಠ, ಪಿಎಸ್ ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಒಂದು ವರ್ಷದ ಕಂದಮ್ಮನೊಂದಿಗೆ ಬಾವಿಗೆ ಹಾರಿದ ತಾಯಿ…!

Related Articles

Back to top button