ಬೆಳಗಾವಿ: ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಪ್ರಕರಣ; 15 ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ FIR; ಕಾಲೇಜಿನಿಂದ ವಿದ್ಯಾರ್ಥಿಗಳ ಸಸ್ಪೆಂಡ್
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಬಿಮ್ಸ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, 15 ವಿದ್ಯಾರ್ಥಿಗಳು ಓರ್ವ ವಿದ್ಯಾರ್ಥಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಕಾಲೇಜು ಚುನಾವಣೆ ವಿಚಾರವಾಗಿ ಬಿಮ್ಸ್ ಕಾಲೇಜು ಹಾಸ್ಟೇಲ್ ನಲ್ಲಿ ಗಲಾಟೆ ನಡೆದಿದೆ. ಬಿಮ್ಸ್ ನ ಎಂಬಿಬಿಎಸ್ 4ನೇ ವರ್ಷದ ವಿದ್ಯಾರ್ಥಿಗಳು ವಿದ್ಯಾರ್ಥಿ ಬುರಾರಾಮ್ ಗೋಧರೆ ಎಂಬಾತನ ರೂಂ ಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. 15 ವಿದ್ಯಾರ್ಥಿಗಳ ಗುಂಪು ಬುರಾರಾಂ ಮೇಲೆ ಹಲ್ಲೆ ನಡೆಸಿದೆ.
ಮೇ 4ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನಿಂದ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ಬಿಮ್ಸ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಹಲ್ಲೆಯಿಂದಾಗಿ ಬುರಾರಾಮ್ ಮೂಗು, ಕಿವಿ, ಬೆರಳಿಗೆ ತೀವ್ರ ಗಾಯಗಳಾಗಿವೆ. ಮೂಗಿನ ಶಸ್ತ್ರಚಿಕಿತ್ಸೆಗಾಗಿ ಬುರಾರಾಮ್ ನನ್ನು ಉದಯಪುರಕ್ಕೆ ರವಾನಿಸಲಾಗಿದೆ. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಮ್ಸ್ ಆಡಳಿತ ಮಂಡಳಿ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, 15 ಜನ ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅವರೆಲ್ಲ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ.
ಅಲ್ಲದೇ ಕಾಲೇಜಿನಿಂದ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ಬಿಮ್ಸ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ; ಕುತೂಹಲ ಮೂಡಿಸಿದ ಚರ್ಚೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ