ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮೂರು ಮಕ್ಕಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಮಾಹಿತಿ ಪಡೆದು ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು ರಾಜ್ಯದಲ್ಲಿ ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ವಿಶೇಷ ಸಿದ್ಧತೆ ನಡೆಸಲಾಗಿದೆ. ಎಷ್ಟೇ ಪ್ರಕರಣಗಳು ಕಂಡುಬಂದರೂ ಮನೆಯಿಂದಲೇ ಟೆಲಿ ಕನ್ಸಲ್ಟೇಷನ್ ಮೂಲಕ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.
ದೇಶದಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಇಂದು ಒಂದು ವರ್ಷ. ಭಾರತ ಬಹುದೊಡ್ಡ ಸಾಧನೆ ಮಾಡಿದೆ. ವಿಶ್ವದ ಬಡ ರಾಷ್ಟ್ರಗಳಿಗೂ ಕೋವಿಡ್ ಲಸಿಕೆ ಹಂಚುವ ಮೂಲಕ ವಿಶ್ವದ ದೊಡ್ಡಣ್ಣ ಮಾಡುವಂತಹ ಕೆಲಸ ಭಾರತ ಮಾಡುತ್ತಿದೆ. ಇದಕ್ಕೆ ಪ್ರಧಾನಿ ಮೋದಿಯವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದರು.
ಕರ್ನಾಟಕದಲ್ಲಿ ಶೇ.99ರಷ್ಟು ಮೊದಲ ಡೋಸ್ ಲಸಿಕೆ ಪೂರ್ಣಗೊಂದಿದೆ. ಶೇ.80ರಷ್ಟು ಜನರು 2ನೇ ಡೋಸ್ ಪಡೆದಿದ್ದಾರೆ. 36 ದೇಶಗಳಲ್ಲಿ ಶೇ.10ರಷ್ಟು ಕೂಡ ಲಸಿಕೆ ನೀಡಿಲ್ಲ. ಆದರೆ ಕರ್ನಾಟಕ ಶೇ.99ರಷ್ಟು ಲಸಿಕೆ ನೀಡಿದೆ ಎಂದರು.
ಇದೇ ವೇಳೆ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮಾಹಿತಿ ಪಡೆದು ಉತ್ತರಿಸುತ್ತೇನೆ. ನನ್ನ ಬಳಿ ತಕ್ಷಣಕ್ಕೆ ಮಾಹಿತಿ ಇರುವುದಿಲ್ಲ. ಮಾಹಿತಿ ತರಿಸಿಕೊಂಡು ನಂತರ ಈ ಬಗ್ಗೆ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.
ಮೂವರು ಪುಟ್ಟ ಮಕ್ಕಳ ನಿಗೂಢ ಸಾವು; ಜಿಲ್ಲೆಯಲ್ಲಿ ಹೆಚ್ಚಿದ ಆತಂಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ