Belagavi NewsBelgaum NewsPolitics

*ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ: ಬಾಣಂತಿಯರು ಹಾಗೂ ಶಿಶುಗಳ ಸಾವು ಪ್ರಕರಣ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನ ತಾಯಿ ಮತ್ತು ಮಕ್ಕಳ ಹೆರಿಗೆ ವಾರ್ಡ್ ಗೆ ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ವಿಜಯೇಂದ್ರ ಅವರಿಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಶಿಕಲಾ ಜೊಲ್ಲೆ ಸೇರಿದಂತೆ ಬಿಜೆಪಿ ಹಲವು ನಾಯಕರು ಸಾಥ್ ನೀಡಿದರು.

ಈ ವೇಳೆ ಮಾತನಾಡಿದ ವಿಜಯೇಂದ್ರ, ಬಳ್ಳಾರಿಯಲ್ಲಿ ಬಾಣಂತಿಯರ ಸಾವಾಗಿದೆ. ಬೆಳಗಾವಿಯಲ್ಲಿಯೂ ಬಾಣಂತಿಯರು, ಶಿಶುಗಳ ಸಾವು ಸಂಭವಿಸಿದೆ. ಇದರಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿ ಮೇಲ್ನೋಟಕ್ಕೆ ಕಾಣುತ್ತಿದೆ. ಈ ಬಗ್ಗೆ ಸತ್ಯಾಂಶ ತಿಳಿದುಕೊಳ್ಳಬೇಕು ಎಂದು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಇದರಲ್ಲಿ ರಾಜಕಾರಣ ಮಾಡುವ ಪ್ರಶ್ನೆ ಇಲ್ಲ. ಇಂದು ಬಡವರಿಗೆ ಅನ್ಯಾಯವಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವ ಬಣಂತಿಯರಿಗೆ ತೊಂದರೆಯಾಗುತ್ತಿದೆ. ಪ್ರಾಣಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಸದನದಲ್ಲಿಯೂ ಪ್ರಸ್ತಾಪಿಸುತ್ತೇವೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button