Belagavi NewsBelgaum NewsKarnataka NewsLatest

*ಬಿಮ್ಸ್ ವೈದ್ಯರ ನಿರ್ಲಕ್ಷ: ಗರ್ಭಿಣಿ ಹಾಗೂ ಹೊಟ್ಟೆಯಲ್ಲಿದ್ದ ಮಗು ಇಬ್ಬರೂ ಸಾವು*

ಪ್ರಗತಿವಾಹಿನಿ ಸುದ್ದಿ: ವೈದ್ಯರ ನಿರ್ಲಕ್ಷಕ್ಕೆ ಗರ್ಭಿಣಿ ಹಾಗೂ ಆಕೆಯ ಹೊಟ್ಟೆಯಲ್ಲಿದ್ದ ಮಗು ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ವೈದ್ಯರ ನಿರ್ಲಕ್ಷ ಖಂಡಿಸಿ ಮೃತರ ಕುಟುಂಬದವರು ಪ್ರತಿಭಟನೆ ನಡೆಸುತ್ತಿದ್ದು, ಆಸ್ಪತ್ರೆ ಬಳಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ತುರಮರಿ ಗ್ರಾಮದ ಗರ್ಭಿಣಿಯಾದ ಈರಮ್ಮ ಈರಪ್ಪ ಶಿಗೀಹಳ್ಳಿ (21) ಅವರನ್ನು ಏಪ್ರಿಲ್ 10ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸರಿಯಾದ ಚಿಕಿತ್ಸೆ ನೀಡದ ಕಾರಣ ಈರಮ್ಮ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸಾವಿನ ಬಳಿಕ ಮಧ್ಯರಾತ್ರಿ ಸಹಿ ಪಡೆದು ಮೃತದೇಹವನ್ನು ಕಳುಹಿಸಲು ಯತ್ನಿಸಿದ್ದಾಗಿ ತಿಳಿದುಬಂದಿದೆ. ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದು, ಎಪಿಎಂಸಿ ಠಾಣೆಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt


Related Articles

Back to top button