ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ನಡುವೆ ಶವವಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ 7 ನರ್ಸ್ ಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಜಿಲ್ಲಾ ಸರ್ಜನ್ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಜಿಲ್ಲಾ ಸರ್ಜನ್ ಡಾ.ಹುಸೇನ್ ಸಾಬ್ 7 ನರ್ಸ್ ಗಳ ವಿರುದ್ಧ ಕ್ರಮ ಕೈಗೊಂಡು, ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ. ತಮ್ಮ ವಿರುದ್ಧದ ಕ್ರಮಕ್ಕೆ ಕಣ್ಣೀರಿಟ್ಟ ನರ್ಸ್ ಗಳು ಆದೇಶ ಹಿಂಪಡೆಯಬೇಕು ಇಲ್ಲವಾದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಆಸ್ಪತ್ರೆಯಲ್ಲಿ ಶವ ಸಾಗಿಸಲು 1 ಆಂಬುಲೆನ್ಸ್ ಮಾತ್ರ ಇದೆ. ಅಲ್ಲದೇ ಸಂಬಂಧಪಟ್ಟ ವೈದ್ಯರಿಲ್ಲದೇ ಶವ ಶಿಫ್ಟ್ ಮಾಡಲು ಕೂಡ ವಸ್ತುಗಳನ್ನು ಕೊಟ್ಟಿಲ್ಲ. ಸೂಕ್ತ ವ್ಯವಸ್ಥೆ ಇಲ್ಲದೇ ಶವ ಸಾಗಿಸಿಲ್ಲ. ಅವ್ಯಸ್ಥೆ ಸರಿಪಡಿಸದೇ ಜಿಲ್ಲಾ ಸರ್ಜನ್ ನಮ್ಮ ವಿರುದ್ಧ ಕ್ರಮಕೈಗೊಂಡಿದ್ದಾರೆ. ರಿಲಿವಿಂಗ್ ಲೆಟರ್ ವಾಪಸ್ ಪಡೆಯದಿದ್ದರೆ ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಭೇಟಿ ಎಫೆಕ್ಟ್: ಬೆಳಗಾವಿಯಲ್ಲಿ ಆಪರೇಶನ್ ಬಿಮ್ಸ್ ಆರಂಭ
ಸೋಂಕಿತ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ