*ಬಳ್ಳಾರಿ ಚಲೋದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಭೀಕರ ಅಪಘಾತ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚದ ಕಾರ್ಯದರ್ಶಿ ಸಾವು*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ “ಬಳ್ಳಾರಿ ಚಲೋ” ಪಾದಯಾತ್ರೆಯಲ್ಲಿ ಭಾಗವಹಿಸಲು ಇಂದು ಬೆಳಿಗ್ಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾದಿಂದ ಬಳ್ಳಾರಿಗೆ ಹೋರಡಲು ತೆರಳುತ್ತಿದ್ದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚದ ಕಾರ್ಯದರ್ಶಿ ಮಹಾವೀರ ಗುಡಾಜ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿ ಗ್ರಾಮೀಣ ಬಿಜೆಪಿ ಕಾರ್ಯಕರ್ತರು ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಬಿಜೆಪಿ ಕಾರ್ಯಕರ್ತರು ದೇಶಕ್ಕಾಗಿ ಹಾಗೂ ಪಕ್ಷಕ್ಕಾಗಿ ತಮ್ಮ ಜವಾಬ್ದಾರಿಯನ್ನು ಅತ್ಯಂತ ಶ್ರದ್ಧಾಪೂರ್ವಕವಾಗಿ ನಿರ್ವಹಣೆ ಮಾಡುತ್ತಿರುತ್ತಾರೆ, ಇಂತಹ ಸಮಯದಲ್ಲಿ ಈ ದುರ್ಘಟನೆ ನಡೆದಿರುವುದು ಮನಸ್ಸಿಗೆ ನೋವು ತರಿಸಿದೆ.
ಮಹಾವೀರ ಗುಡಾಜ ಇವರು ಬಿಜೆಪಿಯ ಬೂತ್ ಮಟ್ಟದಿಂದ ಹಿಡಿದು ಮಂಡಲ ಹಾಗೂ ಜಿಲ್ಲೆಯ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರು, ಪ್ರಸ್ತುತ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತ ಮೋರ್ಚಾದ ಕಾರ್ತದರ್ಶಿಯಾಗಿ ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು, ಮೃತ ಕಾರ್ಯಕರ್ತ ಮಹಾವೀರ ಗುಡಾಜ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೆನೆ. ಮೃತ ಮಹಾವೀರ ಗುಡಾಜ ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದೆ.


