
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಕೋವಿಡ್ ಹಾಗೂ ಫಂಗಸ್ ರೋಗಗಗಳ ಹರಡುವಿಕೆಯ ಸಂಕಷ್ಟದ ಸಮಯದಲ್ಲಿ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ರಕ್ತದ ಕೊರತೆ ನೀಗಿಸಲು ರಕ್ತ ದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಘಟಕದ ಉಪಾಧ್ಯಕ್ಷ ದುಂಡಪ್ಪಾ ಬೆಂಡವಾಡೆ ತಿಳಿಸಿದ್ದಾರೆ.
ಚಿಕ್ಕೋಡಿಯ ಸಂಸದರ ಕಾರ್ಯಾಲಯದಲ್ಲಿ ಸೇವಾ ಹಿ ಸಂಘಟನ ಅಡಿಯಲ್ಲಿ ರೈತ ಮೋರ್ಚಾ ಚಿಕ್ಕೋಡಿ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ರಕ್ತ ದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್ 2 ನೇ ಅಲೆ ಪ್ರಾರಂಭದಿಂದಲೂ ಬಿಜೆಪಿ ಕಾರ್ಯಕರ್ತರು ಒಂದಿಲ್ಲ ಒಂದು ರೀತಿಯಲ್ಲಿ ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಇಂದು ಕೇಂದ್ರದಲ್ಲಿ ಬಿಜೆಪಿ ಸರಕಾರ ತನ್ನ 2 ನೇ ಅವಧಿಯ 2 ನೇ ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ರೈತ ಮೋರ್ಚಾದಿಂದ ರಕ್ತ ದಾನ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ರಾಜೇಶ ನೇರ್ಲಿ, ಬಿಜೆಪಿ ಕಾರ್ಯಕರ್ತರು ಇಡೀ ದೇಶದಲ್ಲಿ ಕೋವಿಡ್ ಪರಿಸ್ಥಿತಿಯಲ್ಲಿ ಅನೇಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಬಿಜೆಪಿ ಕಾರ್ಯಕರ್ತರ ನಡೆ ದೇಶದ ಜನರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.
ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಸತ್ಯಪ್ಪ ನಾಯಕ ಮಾತನಾಡಿ, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ನಿರ್ದೇಶನದ ಮೇರೆಗೆ ಜಿಲ್ಲೆಯ ರೈತ ಮೋರ್ಚಾ ಕಾರ್ಯಕರ್ತರು ರಕ್ತ ದಾನ ಕಾರ್ಯಕ್ರಮದ ಜೊತೆಗೆ ಮೇ. 30 ರಂದು ಬಿಜೆಪಿ ಮಂಡಲ ವ್ಯಾಪ್ತಿಯಲ್ಲಿ ಇನ್ನೂ ಅನೇಕ ಸೇವಾ ಮಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹಾವೀರ ನಾಶಿಪುಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ ಸೇರಿದಂತೆ ರೈತ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರೆಪ್ಪ ಠಕ್ಕಣ್ಣವರ ನಿರೂಪಿಸಿ ವಂದಿಸಿದರು.
ಬೆಳಗಾವಿ ಕೋವಿಡ್ ಪರಿಸ್ಥಿತಿ ಬಿಚ್ಚಿಟ್ಟ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ