Kannada NewsKarnataka NewsLatest
ರಮೇಶ ಜಾರಕಿಹೊಳಿಗೆ ಲಕ್ಷ್ಮಣ ಸವದಿಯಿಂದಲೂ ಟಾಂಗ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವೈಮನಸ್ಸು ಇರುವುದು ಗೊತ್ತಿರುವ ವಿಚಾರ.
ಅಣ್ಣಾ ಸಾಹೇಬ ಜೊಲ್ಲೆ, ಈರಣ್ಣ ಕಡಾಡಿ ನಂತರ ಇದೀಗ ಲಕ್ಷ್ಮಣ ಸವದಿ ಸಹ ರಮೇಶ ಜಾರಕಿಹೊಳಿಗೆ ಬಹಿರಂಗವಾಗಿಯೇ ಟಾಂಗ್ ನೀಡಿದ್ದಾರೆ.
ಒಬ್ಬರ ಕ್ಷೇತ್ರದಲ್ಲಿ ಮತ್ತೊಬ್ಬರು ಹಸ್ತಕ್ಷೇಪ ಮಾಡಬೇಡಿ ಎಂದು ಅಮಿತ್ ಶಾ ಸ್ಪಷ್ಟವಾಗಿ ಹೇಳಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ನಡೆಯಬೇಕಿದೆ ಎಂದು ರಮೇಶ ಜಾರಕಿಹೊಳಿಗೆ ಲಕ್ಷ್ಮಣ ಸವದಿ ಟಾಂಗ್ ನೀಡಿದ್ದಾರೆ. ಈ ಮೂಲಕ ಅಥಣಿ ಕ್ಷೇತ್ರದಲ್ಲಿನ ರಮೇಶ ಜಾರಕಿಹೊಳಿ ಹಸ್ತಕ್ಷೇಪಕ್ಕೆ ತೀವ್ರ ಕಿಡಿಕಾರಿದ್ದಾರೆ.
ಅಥಣಿ ಬಿಜೆಪಿ ಟಿಕೆಟ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದ ಜನರು ನಾನು ಸ್ಪರ್ಧೆ ಮಾಡಲಿ ಎಂದು ಹೇಳುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳಲಿದೆ ನೋಡಬೇಕು ಎಂದು ಹೇಳಿದ್ದಾರೆ.




