*ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಅಣಕು ಶವಯಾತ್ರೆ ನಡೆಸಿದ ಬಿಜೆಪಿ ಕಾರ್ಯಕರ್ತರು*

ಪ್ರಗತಿವಾಹಿನಿ ಸುದ್ದಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ 30ನಿಮಿಷಕ್ಕೂ ಹೆಚ್ಚು ಸಮಯ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಸಚಿವ ಬಿ.ನಾಗೇಂದ್ರ ಅವರ ಅಣಕು ಶವಯಾತ್ರೆ ಮಾಡಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ, ಒಬ್ಬ ಸಚಿವರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ ಜನರ ಧ್ವನಿಯಾಗಿರುವ ಪ್ರತಿಪಕ್ಷದ ಪ್ರತಿಭಟನೆಯನ್ನೇ ಹತ್ತಿಕ್ಕಲು ಮುಂದಾಗಿದೆ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವುದೂ ಕಾಂಗ್ರೆಸ್ ಸರ್ಕಾರದ ಕಣ್ಣಿಗೆ ಅಪರಾಧವೇ..? ಎಂದು ಪ್ರಶ್ನಿಸಿದರು.
ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೂ, ಜನರ ಹಣಕ್ಕೆ ನ್ಯಾಯ ಸಿಗುವವರೆಗೂ ಹಾಗೂ ಅಕ್ರಮದ ಸಂಪೂರ್ಣ ತನಿಖೆ ನಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಹಳ್ಳಿ ಹಳ್ಳಿಗಳಲ್ಲಿ ಹೋರಾಟ ಮುಂದುವರೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡ್ರ ಮಾತನಾಡಿ ನಮ್ಮದು ಕೇವಲ ಒಂದು ಪಕ್ಷದ ಹೋರಾಟವಲ್ಲ. ಇದು ದಲಿತರ ಪರವಾದ ಹೋರಾಟ. 1 ಕೋಟಿಗೂ ಅಧಿಕ ದಲಿತರಿಗೆ ಸೇರಿದ 187 ಕೋಟಿ ರೂ. ಹಣವನ್ನು ಲೂಟಿ ಮಾಡಿದ ಸಚಿವ ಬಿ.ನಾಗೇಂದ್ರ ವಿರುದ್ಧ ನಾವು ನ್ಯಾಯಯುತ ಹೋರಾಟ ಮಾಡುತ್ತಿದ್ದೇವೆ. ಲೂಟಿ ಮಾಡುವ ಮೂಲಕ ದಲಿತರ ಬದುಕನ್ನು ಕಾಂಗ್ರೆಸ್ ನಾಯಕರು ಹಾಳು ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಮಹೇಶ ಕುಮಟಳ್ಳಿ, ಅನಿಲ ಬೆನಕೆ, ಅರವಿಂದ ಪಾಟೀಲ ಮುಖಂಡರಾದ ಎಂ.ಬಿ.ಜಿರಲಿ, ಈರಣ್ಣ ಅಂಗಡಿ, ಸೋನಾಲಿ ಸರ್ನೊಬತ್, ಎಫ್.ಎಸ್.ಸಿದ್ಧನಗೌಡ್ರ, ನಿತಿನ್ ಚೌಗಲೆ, ಮಲ್ಲಿಕಾರ್ಜುನ ಮಾದಮ್ಮನವರ,ಸಂದೀಪ ದೇಶಪಾಂಡೆ,ವೀರುಪಾಕ್ಷ ಮಾಮನಿ, ಶ್ರೀಕರ ಕುಲಕರ್ಣಿ,ಧನಶ್ರೀ ದೇಸಾಯಿ, ಮುರುಘೇಂದ್ರಗೌಡ ಪಾಟೀಲ,ಮಹಾಂತೇಶ ಚಿನ್ನಪ್ಪಗೌಡ್ರ, ಮಹಾದೇವ ಧರೆಣ್ಣವರ, ಸಚಿನ್ ಕಡಿ, ಮಹಾದೇವ ಶೆಕ್ಕಿ, ಮನೋಜ ಪಾಟೀಲ,ಪ್ರಶಾಂತ್ ಅಮ್ಮಿನಭಾವಿ,ಬಸವರಾಜ ಸಾಣಿಕೊಪ್ಪ, ಸುಭಾಷ್ ತುರಮರಿ, ರಾಜಶೇಖರ ಡೋಣಿ, ಈರಯ್ಯ ಖೋತ ಹಾಗೂ ಕಾರ್ಯಕರ್ತರಿದ್ದರು




