Belagavi NewsBelgaum NewsKannada NewsKarnataka News

*ಧಾರಾಕಾರ ಮಳೆ: ಹುಟ್ಟುಹಬ್ಬದ ಪಾರ್ಟಿ ವೇಳೆಯೇ ಕುಸಿದು ಬಿದ್ದ ಕಟ್ಟಡ: ಕೂದಲೆಳೆ ಅಂತರದಲ್ಲಿ ಪಾರಾದ ಯುವಕರು*

ಪ್ರಗತಿವಾಹಿನಿ ಸುದ್ದಿ: ಧಾರಾಕಾರ ಮಳೆಗೆ ಹಳೆಯ ಕಟ್ಟಡವೊಂದು ಏಕಾಏಕಿ ಕುಸಿದು ಬಿದ್ದಿದ್ದು, 15 ಯುವಕರು ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಈ ಅವಘಡ ಸಂಭವಿಸಿದೆ. ಘಟನೆ ವೇಳೆ ಯುವಕರು ಸ್ನೇಹಿತನ ಬರ್ತ್​​ ಡೇ ಪಾರ್ಟಿ ಆಚರಿಸುತ್ತಿದ್ದರು. ಅಥಣಿ ಪಟ್ಟಣದ ಹಳದಿ ಕಟ್ಟಡವೊಂದರಲ್ಲಿ ಯುವಕರ ತಂಡವೊಂದು ತಮ್ಮ ಸ್ನೇಹಿತನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿತ್ತು. ಈ ವೇಳೆ ಕಟ್ಟಡದಿಂದ ವಿಚಿತ್ರವಾದ ಶಬ್ದ ಕೇಳಿಬಂದಿದೆ. ಅಪಾಯದ ಮುನ್ಸೂಚನೆ ಅರಿತ ಯುವಕರು ತಕ್ಷಣವೇ ಕಟ್ಟಡದಿಂದ ಹೊರಗೆ ಓಡಿ ಬಂದಿದ್ದಾರೆ.

Home add -Advt

ಯುವಕರು ಹೊರಬರುತ್ತಿದ್ದಂತೆ ಇಡೀ ಕಟ್ಟಡ ಕುಸಿದು ಬಿದ್ದಿದೆ. ಯುವಕರ ಸಮಯಪ್ರಜ್ಞೆಯಿಂದಾಗಿ ಭಾರಿ ದುರಂತವೊಂದು ತಪ್ಪಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button