Belagavi NewsBelgaum NewsKannada NewsKarnataka NewsLatest
*ಬೆಳಗಾವಿಯಲ್ಲಿ ಬಸ್ ಅಪಘಾತ; ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನ ಸೌಧದ ಬಳಿ ಕೆಕೆ ಕೊಪ್ಪ ಗ್ರಾಮಕ್ಕೆ ತೆರಳುವ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ನಿರ್ವಾಹಕಿ ಸೇರಿ ಕೆಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವಿಷಯ ಗಮನಕ್ಕೆ ಬಂದ ತಕ್ಷಣ ಆಸ್ಪತ್ರೆಗೆ ತೆರಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಗಾಯಾಳುಗಳ ಆರೋಗ್ಯ ವಿಚಾರಿಸಿ, ಎಲ್ಲರಿಗೂ ಧೈರ್ಯವನ್ನು ತುಂಬಿದರು. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆಯನ್ನು ನೀಡಿದರು.

ಸುವರ್ಣಸುಧೌ ಬಳಿ ಇಂದು ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ಸಿಬಿಟಿ ಬಸ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.