Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಸುವರ್ಣಸೌಧ ಬಳಿ ಬಸ್ ಪಲ್ಟಿ; ನಿರ್ವಾಹಕಿ ಸೇರಿ ಇಬ್ಬರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಸಿಬಿಟಿ ಬಸ್ ಪಲ್ಟಿಯಾಗಿ ಬಿದ್ದಿದ್ದು, ಬಸ್ ನಿರ್ವಾಹಕಿ ಹಾಗೂ ಓರ್ವ ಬಾಲಕಿ ಸ್ಥಿತಿ ಗಂಭೀರವಾಗಿದೆ.

10ಕ್ಕೂ ಹೆಚ್ಚು ಜನರು ಇದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿ ಬಿದ್ದಿದೆ. ಬಸ್ ನಲ್ಲಿ ಸಿಲುಕಿರುವ ಪ್ರಯಾಣಿಕರನ್ನು ಹೊರ ತೆಗೆಯಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಘಟನೆಯಲ್ಲಿ ಕಂಡಕ್ಟರ್ ಶೋಭಾ ಹಾಗೂ ಸಹನಾ ಎಂಬ ಬಾಲಕಿಗೆ ಹೆಚ್ಚು ಗಾಯವಾಗಿದ್ದು, ಮತ್ತಿತರರು ಸಣ್ಣ ಪುಟ್ಟ ಗಾಯ ದಿಂದ ಚೇತರಿಸಿಕೊಳ್ಳುತ್ತಿದ್ದಾರೆ.

Home add -Advt

ಗಂಗವ್ವ, ರಾಜಶ್ರೀ, ರಾಯಪ್ಪ ಇತರ ಗಾಯಾಳುಗಳು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button