Vikalachetanara Day
Cancer Hospital 2
Bottom Add. 3

*ಡ್ರೈವ್ ಮಾಡುವಾಗಲೇ ಬಸ್ ಚಾಲಕನಿಗೆ ಹೃದಯಾಘಾತ; ಆದರೂ ಪ್ರಯಾಣಿಕರ ಪ್ರಾಣ ಉಳಿಸಿದ ಮಹಾನುಭಾವ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿಯಿಂದ ಪುಣೆಗೆ ತೆರಳುತ್ತಿದ್ದ ಬಸ್ ನಲ್ಲಿ ಬಸ್ ಚಾಲಕನಿಗೆ ಏಕಾಏಕಿ ಹೃದಯಾಘಾತವಾಗಿದೆ. ಆದರೂ ಸಮಯಪ್ರಜ್ಞೆಯಿಂದ ಬಸ್ ಚಾಲಕ ತಾನು ಸಾಯುವ ಮುನ್ನ ಪ್ರಯಾಣಿಕರೆಲ್ಲರ ಜೀವ ಉಳಿಸಿದ್ದಾನೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಸವದತ್ತಿಯಿಂದ ಪುಣೆಗೆ ತೆರಳುತ್ತಿತ್ತು. ಕರ್ತವ್ಯ ನಿರತ ಬಸ್ ಚಾಲಕನಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಎದೆನೋವು ಕಾಣಿಸಿಕೊಳ್ಳುತ್ತಿದ್ದಂತೆ ಸಾವರಿಸಿಕೊಂಡು ಬಸ್ ನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾನೆ. ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆಯೇ ಚಾಲಕ ಮೃತಪಟ್ಟಿದ್ದಾರೆ.

ದೊಡವಾಡ ಗ್ರಾಮದ ಮೂಗಪ್ಪ ಶಿವಪುತ್ರಪ್ಪ ಸಂಗೊಳ್ಳಿ (41) ಮೃತ ಚಾಲಕ. ರಸ್ತೆ ಪಕ್ಕದಲ್ಲಿ ಬಸ್ ನಿಲ್ಲಿಸಿದ್ದ ಚಾಲಕ ಎದೆನೋವಿನಿಂದ ಬಳಲುತ್ತಿರುವುದಾಗಿ ಹೇಳಿದ್ದಾನೆ. ತಕ್ಷಣ ಪ್ರಯಾಣಿಕರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತಲುಪುವ ಮೊದಲೇ ಬಸ್ ಚಾಲಕನ ಪ್ರಾಣ ಪಕ್ಷಿ ಹಾರಿಹೋಗಿದೆ.

ತಾನು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದರೂ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರ ಜೀವ ಉಳಿಸಿ ಬಸ್ ಚಾಲಕ ಪ್ರಾಣ ಬಿಟ್ಟಿದ್ದಾನೆ.


Bottom Add3
Bottom Ad 2

You cannot copy content of this page