ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸರ್ಕಾರಿ ಬಸ್ ಚಾಲಕನ ಮೇಲೆ ಲಾರಿ ಚಾಲಕರು ಮನಬಂದಂತೆ ಹಲ್ಲೆ ನಡೆಸಿ, ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸರ್ಕಾರಿ ಬಸ್ ಚಾಲಕ ಲಾರಿಗಳನ್ನು ಓವರ್ ಟೇಕ್ ಮಾಡಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕರು ಬಸ್ ಚಾಲಕನನ್ನು ಹಿಡಿದು ಥಳಿಸಿದ್ದಾರೆ.
ಬಸ್ ನಿಪ್ಪಾಣಿ ಬಳಿ ಲಾರಿಯನ್ನು ಓವರ್ ಟೇಕ್ ಮಾಡಿ ಬೆಳಗಾವಿಯತ್ತ ಸಾಗಿತ್ತು. ಇದಕ್ಕೆ ಆಕ್ರೋಶಗೊಂಡ ಲಾರಿ ಚಾಲಕರು ನಗರದತ್ತ ಪ್ರವೇಶುತ್ತಿದ್ದ ಬಸ್ ನ್ನು ತಡೆದು ನಿಲ್ಲಿಸಿ, ಬಸ್ ಚಾಲಕನಿಗೆ ಹಿಗ್ಗಾಮುಗ್ಗಥ ಳಿಸಿದ್ದಾರೆ. ಬಳಿಕ ಬಸ್ ಚಾಲಕನ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಮಾಳ ಮಾರುತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ