Kannada NewsKarnataka NewsLatest

*ಬೆಳಗಾವಿ: ಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ.

ನಂದಿಕುರಳಿ ನಿವಾಸಿ ಸಂಜನಾ ದತ್ತವಾಡ ಗಾಯಾಳು ವಿದ್ಯಾರ್ಥಿನಿ. ಬಸ್ ನಿಂದ ಬಿದ್ದು ಸಂಜನಾಳ ತಲೆಗೆ ಗಂಭೀರ ಗಾಯಗಳಾಗಿವೆ. ರಾಯಭಾಗದಿಂದ ಚಿಕ್ಕೋಡಿಗೆ ಬರುತ್ತಿದ್ದ ಸಾರಿಗೆ ಬಸ್ ನಲ್ಲಿ ಈ ಗಹ್ಟನೆ ನಡೆದಿದೆ.

Home add -Advt

ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button