Kannada NewsLatest

ಏನಯ್ಯ ಸತೀಶ, ಟೆನ್ ಶನ್ ಕೊಡ್ತಿದೀಯಲ್ಲಯ್ಯಾ…ಎಂದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕತೆ ಪಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಡುವೆ ಕೊನೇ ಕ್ಷಣದವರೆಗೂ ತೀವ್ರ ಪೈಪೋಟಿ ನಡೆಡಿದೆ.

ಈ ನಡುವೆ ತಮ್ಮ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ ಕರೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಏನಯ್ಯ ಸತೀಶ, ಟೆನ್ ಶನ್ ಕೊಡ್ತಿದೀಯಲ್ಲಯ್ಯಾ… ಎಂದು ಹೇಳುವಮೂಲಕ ಮತ ಎಣಿಕೆಯ ಮಾಹಿತಿ ಪಡೆದಿದ್ದಾರೆ.

ಈ ವೇಳೆ ಸತೀಶ್ ಜಾರಕಿಹೊಳಿ ತಾವು 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button