Kannada NewsLatest

ಸಿದ್ದರಾಮಯ್ಯ ನೋಡಲು ಮುಗಿಬಿದ್ದ ಅಭಿಮಾನಿಗಳ ಮೇಲೆ ಲಾಠಿ ಪ್ರಹಾರ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಉಪಚುನಾವಣಾ ಅಖಾಡ ರಂಗೇರಿದ್ದು, ಕುಂದಾನಗರಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿವೆ. ಇಂದು ಬೆಳಗಾವಿಗೆ ಆಗಮಿಸಿದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ನೊಡಲು ಮುಗಿಬಿದ್ದ ಅಭಿಮಾನಿಗಳ ಮೇಲೆ ಪೊಲಿಸರು ಲಾಠಿ ಪ್ರಹಾರ ನಡೆಸಿರುವ ಘಟನೆ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ಚುನಾವಣಾ ಪ್ರಚಾರ ನಡೆಸಿದ ಸಿದ್ದರಾಮಯ್ಯ ಸವದತ್ತಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಈ ವೇಳೆ ಸಿದ್ದರಾಮಯ್ಯ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಜನರು ಮುಗಿಬಿದ್ದಿದ್ದಾರೆ. ಈ ವೇಳೆ ನೂಕು ನುಗ್ಗಲು ಉಂಟಾಗಿದೆ. ಕೊರೊನಾ ಭೀತಿ ಬಗ್ಗದೇ ನಿಯಮಗಳನ್ನು ಗಾಳಿ ತೂರಿ ಸಾಗರೋಪಾದಿಯಲ್ಲಿ ನುಗ್ಗಿದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಸಿದ್ದರಾಮಯ್ಯ ವಾಪಸ್ಸಾಗುತ್ತಿದ್ದಾಗ ಸಾವಿರಾರು ಜನರು ಮುಗಿ ಬಿದ್ದಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದ್ದಾರೆ.

Home add -Advt

Related Articles

Back to top button