ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರೈತರ ವಿರೋಧದ ನಡುವೆಯೂ ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಯನ್ನು ಬೆಳಗಾವಿ ಜಿಲ್ಲಾಡಳಿತ ಮುಂದುವರೆಸಿದೆ. ರಾಜ್ಯ ಸರ್ಕಾರದ ಆದೇಶದಂತೆ ಬೈಪಾಸ್ ಕಾಮಗಾರಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ರಸ್ತೆ ಕಾಮಗಾರಿಗಾಗಿ ಭೂ ಸ್ವಾಧೀನ ಪಡಿಸಿಕೊಂಡಿರುವ 825 ರೈತರಿಗೆ ಒಟ್ಟು 25 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಬೆಳೆಗಳನ್ನು ನಾಶ ಮಾಡದೇ ಕಾಮಗಾರಿ ನಡೆಸುವುದಾಗಿ ರೈತರಿಗೆ ಭರವಸೆ ನೀಡಲಾಗಿದೆ ಎಂದರು.
ಇನ್ನು ನಿನ್ನೆ ನಡೆದ ರೈತರ ಪ್ರತಿಭಟನೆ ವೇಳೆ ಯುವಕನೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಆತನ ಆರೋಗ್ಯ ವಿಚಾರಿಸಿದ್ದೇನೆ ಎಂದು ಹೇಳಿದರು.
ರೈತರ ವಿರೋಧದ ನಡುವೆ ರಸ್ತೆ ಕಾಮಗಾರಿಗೆ ಮುಂದಾದ ಅಧಿಕಾರಿಗಳು; ಬೆಳೆ ಹಿಡಿದು ಪ್ರತಿಭಟನೆ ನಡೆಸಿದ ಅನ್ನದಾತ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ