
ಪ್ರಗತಿವಾಹಿನಿ ಸುದ್ದಿ: ಕಾರು ಡಿಕ್ಕಿ ಹೊಡೆದು ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಬೆನ್ನಲ್ಲೇ ಕಾರು ಚಾಲಕ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದ ಬಳಿ ನಡೆದಿದೆ.
ವಿನಯ್ (8) ಮೃತ ಬಾಲಕ. ನಾಗನೂರು ಬಳಿ ಬಾಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಚಾಲಕ ತನ್ನದೇ ಕಾರಿನಲ್ಲಿ ಬಾಲಕನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ ಅಷ್ಟರಲ್ಲೇ ಬಾಲಕ ಸಾವನ್ನಪ್ಪಿದ್ದ. ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ವೈದರು ತಿಳಿಸಿದ್ದಾರೆ.
ಪೋಷಕರಿಗೆ ವಿಷಯ ತಿಳಿಸುವಂತೆ ಹೇಳಿ ಚಾಲಕ ಮೂಡಲಗಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ