Kannada NewsLatest

ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಕಾರು ಅಪಘಾತ; ಓರ್ವನ ದುರ್ಮರಣ, ಮೂವರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟದ ಹೊರವಲಯದಲ್ಲಿ ಸಂಭವಿಸಿದೆ.

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಮೃತರನ್ನು ಮುರಗೋಡ ಗ್ರಾಮದ ಸಂಜಯ ಜಯಸಿಂಗ್ ಚೌಗಲೆ (58) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಹುಕ್ಕೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ವಾಮೀಜಿಗಳು ತಲೆಯ ಮೇಲೆ ಖಾವಿ ಬಟ್ಟೆ ಹಾಕಿಕೊಳ್ಳುತ್ತಾರೆ; ಅದನ್ನೂ ಪ್ರಶ್ನೆ ಮಾಡ್ತೀರಾ?; ಸಿದ್ದರಾಮಯ್ಯ ಪ್ರಶ್ನೆ

Related Articles

Back to top button