Kannada NewsLatest
ಬೆಳಗಾವಿ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿಯ ಗುರ್ಲಾಪೂರ ಕ್ರಾಸ್ ಬಳಿ ಸಂಭವಿಸಿದೆ.
ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಹೊಡೆದು ಈ ದುರಂತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಮೃತರನ್ನು 22 ವರ್ಷದ ವಿನಾಯಕ ಚಿದಾನಂದ ಕಾವೇರಿ ಹಾಗೂ ಮುತ್ತು ಮಾಳಿ ಎಂದು ಗುರುತಿಸಲಾಗಿದೆ. ಈರಯ್ಯ ಹಿರೇಮಠ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹಾರೂಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಧಾರವಾಡದಿಂದ ಅಥಣಿಗೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಹಾರೋಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ ನಲ್ಲಿ ರಾಜ್ಯಕ್ಕೆ ಅಪ್ಪಳಿಸಲಿದೆ ಕೊರೊನಾ 3ನೇ ಅಲೆ

