Latest

ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಡ್ರಗ್ಸ್ ಪ್ರಕರಣ ಕ್ಕೆ ಸಂಬಂಧಿಸಿದಂತೆ ಇದೀಗ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಹೈಪ್ರೊಫೈಲ್ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ್ದ ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ಸೇರಿದಂತೆ 10 ಜನರನ್ನು ವಶಕ್ಕೆ ಪಡೆದಿದ್ದರು. ಇದೀಗ ಶಾರೂಖ್ ಪುತ್ರ ಆರ್ಯನ್ ಖಾನ್, ಅರ್ಬಾಜ್ ಸೇರಿದಂತೆ ಮೂವರನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದು, ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ.

Home add -Advt

ಮುಂಬೈನ ಸಮುದ್ರ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಿನ್ನೆ ರಾತ್ರಿ ದಾಳಿ ನಡೆಸಿದ್ದ ಎನ್ ಸಿಬಿ ಅಧಿಕಾರಿಗಳು 10 ಜನರನ್ನು ವಶಕ್ಕೆ ಪಡೆದಿದ್ದರು.

ಪಾರ್ಟಿಯಲ್ಲಿ ಡ್ರಗ್ಸ್ ಸರಬರಾಜು ಸೇವನೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ 10 ಆರ್ಯನ್ ಖಾನ್ ಸೇರಿದಂತೆ 10 ಜನರನ್ನು ವಶಕ್ಕೆ ಪಡೆದಿದ್ದ ಎನ್ ಸಿಬಿ ಅಧಿಕಾರಿಗಳು ಇದೀಗ ಮೂವರನ್ನು ಬಂಧಿಸಿದ್ದಾರೆ.

ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ; ಶಾರುಖ್ ಖಾನ್ ಪುತ್ರ ಎನ್ ಸಿಬಿ ಬಲೆಗೆ

Related Articles

Back to top button