
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪದ ಬಳಿ ನಡೆದಿದೆ.
ಮೃತರನ್ನು 11 ವರ್ಷದ ಸಂದೀಪ್ ಮಲ್ಲೂರ್ ಹಾಗೂ 45 ವರ್ಷದ ಶಿವಪ್ಪ ಮಲ್ಲೂರ್ ಎಂದು ಗುರುತಿಸಲಾಗಿದೆ. ಮೃತರು ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದವರು.
ಧಾರವಾಡದಲ್ಲಿದ್ದ ಮಕ್ಕಳನ್ನು ನೋಡಿಕೊಂಡು ಹಿಂತಿರುಗುತ್ತಿದ್ದಾಗ ಕಾರು, ಬೈಕ್ ಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕನ ಬೇಜವಾಬ್ದಾರಿಯೇ ಘಟನೆಗೆ ಕಾರಣ ಎನ್ನಲಾಗಿದೆ. ಬೈಲಹೊಂಗಲ ಠಾಣೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿರುವ ಪೊಲಿಸರು ವಿಚಾರಣೆ ನಡೆಸಿದ್ದಾರೆ.
ಆಕೆ ನನ್ನ ಪತ್ನಿಯಲ್ಲ; ಸಾಕ್ಷಿಯೂ ಇಲ್ಲ; ರಾಜಕುಮಾರ್ ಟಾಕಳೆ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ