ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿಪರ ನಿಲುವುಗಳಿಗೆ ಆದ್ಯತೆ ನೀಡಲಾಗುವುದು ಎಂದು ವಿಧಾನಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಹೊಳಿ ಹೇಳಿದರು.
ಬೆಳಗಾವಿ ತಾಲೂಕು ಪಂಚಾಯ್ತಿಯಲ್ಲಿ ಮಂಗಳವಾರ ಮೊದಲ ಬಾರಿಗೆ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಅಭಿವೃದ್ಧಿಯಾಗುವುದು ಮುಖ್ಯ. ಎಲ್ಲ ಅಧಿಕಾರಿಗಳು, ಸಿಬ್ಬಂದಿ ಕ್ಷೇತ್ರದ ಜನತೆಯ ಬೇಡಿಕೆಗಳಿಗೆ ಅನುಸಾರವಾಗಿ ಅಭಿವೃದ್ಧಿಗೆ ಒತ್ತುಕೊಟ್ಟು ಕಾರ್ಯ ನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಗ್ರಾಮ ಪಂಚಾಯತ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ವಿವರ, ಜಲಜೀವನ ಮಿಷನ್ ಯೋಜನೆಯ ಅನುಷ್ಠಾನ, ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ತಡೆಗಟ್ಟುವಿಕೆಯ ಕುರಿತು ಕೈಗೊಂಡ ಕ್ರಮಗಳು, ಗ್ರಾಮ ಪಂಚಾಯತ ಹಳೆ ಕಟ್ಟಡ ಹಾಗೂ ಹೊಸ ಕಟ್ಟಡಗಳ ಮಾಹಿತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಇದೇ ಸಂರ್ಭದಲ್ಲಿ ತಾಲೂಕು ಪಂಚಾಯ್ತಿ ವತಿಯಿಂದ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ರಾಜೇಶ ಧನವಾಡಿ, ಡೆಪ್ಯುಟಿ ಸೆಕ್ರೆಟರಿ ಬಸವರಾಜ ಜಕನಾಯ್ಕ್, ತಾಲೂಕ ಪಂಚಾಯತ್ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ, ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.
ನಾಳೆಯಿಂದಲೇ ಬಿಗಿ ನಿಯಮ; ಟೆಸ್ಟ್ ಹೆಚ್ಚಳ, ಮಾರ್ಕೆಟ್ ವಿಕೇಂದ್ರೀಕರಣಕ್ಕೆ ಸೂಚನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ