*ಬಿಸಿಲ ಝಳಕ್ಕೆ ಬಸವಳಿದ ಸಿಬ್ಬಂದಿ; ಬೆಳಗಾವಿಯ ಚೆಕ್ ಪೋಸ್ಟ್ ಗಳಲ್ಲಿ ಏರ್ ಕೂಲರ್ ವ್ಯವಸ್ಥೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ರಣಬಿಸಿಲಿಗೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಒಂದೆಡೆ ಸುಡುಬಿಸಿಲು, ಇನ್ನೊಂದೆಡೆ ಕುಡಿಯುವ ನೀರಿಗೆ ಹಾಹಾಕಾರ. ಈ ಮಧ್ಯೆ ಕಾಲರಾ, ಡೆಂಗ್ಯೂನಂತಹ ಅನಾರೋಗ್ಯ ಪ್ರಕರಣಗಳು ಹೆಚ್ಚುತ್ತಿವೆ. ಕುಂದಾನಗರಿ ಬೆಳಗಾವಿಯಲ್ಲಿ ಬಿಸಿಲ ಝಳದ ನಡುವೆ ಲೋಕಸಭಾ ಚುನಾವಣಾ ಕಾವು ಏರುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಚೆಕ್ ಪೋಸ್ಟ್ ಗಳಿಗೆ ಏರ್ ಕೂಲರ್ ವ್ಯವಸ್ಥೆ ಕಲ್ಪಿಸಿದೆ.
ಕುಂದಾನಗರಿ ಬೆಳಗಾವಿಯಲ್ಲಿ ಬಿಸಿಲ ಬೇಗೆಗೆ ಚೆಕ್ ಪೋಸ್ಟ್ ಸಿಬ್ಬಂದಿಗಳು ಹೈರಾಣಾಗಿದ್ದಾರೆ. ಪೊಲೀಸ್ ಹಾಗೂ ಚುನಾವಣಾ ಸಿಬ್ಬಂದಿಗಳ ಅನುಕೂಲಕ್ಕಾಗಿ ಇದೀಗ ಜಿಲ್ಲಾಡಳಿತ ಚೆಕ್ ಪೋಸ್ಟ್ ಗಳಿಗೆ ಏರ್ ಕೂಲರ್ ಅಳವಡಿಸಿದೆ.
ಬೆಳಗಾವಿಯ 66 ಚೆಕ್ ಪೋಸ್ಟ್ ಗಳಿಗೆ ಏರ್ ಕೂಲರ್ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹಾಗೂ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟೀನ್ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ