Kannada NewsLatest

ಬೆಳಗಾವಿ: ಚಿಕನ್ ಅಂಗಡಿ ಮೇಲೆ ದಾಳಿ ನಡೆಸಿ, ಬೆಂಕಿಯಿಟ್ಟ ಪುಂಡರು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಚಿಕನ್ ಅಂಗಡಿಯೊಂದರ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳ ಗುಂಪು ಅಂಗಡಿಗೆ ಬೆಂಕಿಯಿಟ್ಟು ದಾಂಧಲೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.11ರಂದು ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದೇವಸ್ಥಾನದ ಕಳಸಾರೋಹಣದ ವೇಳೆ ಚಿಕನ್ ಅಂಗಡಿ ಓಪನ್ ಆಗಿದ್ದಕ್ಕೆ ಪುಂಡರ ಗುಂಪೊಂದು ಅಂಗಡಿ ಮೇಲೆ ದಾಳಿ ನಡೆಸಿ, ಅಂಗಡಿ ಬೋರ್ಡ್ ನ್ನು ಕಿತ್ತು ಹಾಕಿ ಬಳಿಕ ಅಂಗಡಿಗೆ ಬೆಂಕಿಯಿಟ್ಟಿದೆ. ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದಾಳಿ ನಡೆಸಿದ ಕಿಡಿಗೇಡಿಗಳೇ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ ಎನ್ನಲಾಗಿದೆ. ದೂರು ನಿಡಿದರೂ ಪ್ರಕರಣ ದಾಖಲಿಸಿಕೊಳ್ಳದ ಪೊಲೀಸರು ಮಾಳಮಾರುತಿ ಠಾಣೆಯಲ್ಲಿ ಸಂಧಾನ ಮಾಡಿ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಪೊಲಿಸರ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಬೆಳಗಾವಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ; ಮೂವರ ಬಂಧನ

Related Articles

Back to top button