Kannada NewsLatest

ಚಿಕನ್ ಮಾರುತ್ತಿದ್ದ ಮಹಿಳೆ ಕೊರೊನಾದಿಂದ ಸಾವು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಗಲ್ಲಿ ಗಲ್ಲಿಯಲ್ಲೂ ಮಹಾಮಾರಿ ಅಟ್ಟಹಾಸ ಮುಂದುವರೆದಿದೆ. ಈ ನಡುವೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟದಲ್ಲಿ ಚಿಕನ್ ತಿಂದವರಿಗೆ ಕೊರೊನಾ ಭೀತಿ ಶುರುವಾಗಿದೆ.

ಹುಕ್ಕೇರಿ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ಚಿಕನ್ ಅಂಗಡಿ ಇಟ್ಟುಕೊಂಡಿದ್ದ 58 ವರ್ಷದ ಮಹಿಳೆ ನಿನ್ನೆ ಸಾವನ್ನಪ್ಪಿದ್ದು, ಇಂದು ಮಹಿಳೆಯ ವರದಿಯಲ್ಲಿ ಕೊರೊನಾ ಪಾಸಿಟೀವ್ ಬಂದಿತ್ತು. ಈ ಹಿನ್ನಲೆಯಲ್ಲಿ ಚಿಕನ್ ಖರೀದಿಸಿದ ಎಲ್ಲರಲ್ಲೂ ಇದೀಗ ಕೊರೊನಾತಂಕ ಶುರುವಾಗಿದೆ.

ಮನೆ ಪಕ್ಕದಲ್ಲೇ ಅಂಗಡಿ ಇಟ್ಟು ಚಿಕನ್ ಮಾರಾಟ ಮಾಡುತ್ತಿದ್ದ ಕುಟುಂಬದ ಮಹಿಳೆ ಗುರುವಾರ ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದರು. ಸಾವಿನ ನಂತರ ಮಹಿಳೆಯ ಸ್ವಾಬ್ ಪರೀಕ್ಷಿಸಿದಾಗ ಮಹಿಳೆಗೆ ಕೊರೊನಾ ಇರುವುದು ಖಚಿತವಾಗಿದೆ. ಕುಟುಂಬದವರು ಮಹಿಳೆಯ ಅಂತ್ಯ ಸಂಸ್ಕಾರವನ್ನ ಬೆಳಗಾವಿಯಲ್ಲಿಯೇ ನೆರವೇರಿಸಿದ್ದಾರೆ.

ಮಹಿಳೆಯನ್ನ ಪರೀಕ್ಷಿಸಿದ ಸಂಕೇಶ್ವರ ಪಟ್ಟಣದ ಖಾಸಗಿ ವೈದ್ಯ ಹಾಗೂ ಮಹಿಳೆಯ ಕುಟುಂಬಸ್ಥರನ್ನ ಕ್ವಾರಂಟೈನ್ ಮಾಡಲಾಗಿದೆ. ಮಹಿಳೆ ವಾಸವಿದ್ದ ಹುಕ್ಕೇರಿ ಪಟ್ಟಣದ ಏರಿಯಾವನ್ನ ಪೊಲೀಸರು ಹಾಗೂ ಪುರಸಭೆ ಅಧಿಕಾರಿಗಳು ಸೀಲ್‍ಡೌನ್ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button