Kannada NewsKarnataka NewsLatestPolitics

*ಐವರು ಶಂಕಿತ ಉಗ್ರರ ಬಂಧನ; ಸಿಸಿಬಿ ಪೊಲೀಸರಿಗೆ ಸಿಎಂ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಸಂಭವಿಸಬಹುದಾಗಿದ್ದ ಭಾರಿ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Home add -Advt

ಭಯೋತ್ಪಾದಕ ಚಟುವಟಿಕೆ ಸೇರಿದಂತೆ ಯಾವುದೇ ತೆರನಾದ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರಿಗೂ ಸುರಕ್ಷಿತ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.


Related Articles

Back to top button