ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಇಂದು ಚಿಕ್ಕೋಡಿ ನಗರದಲ್ಲಿರುವ ನೂತನ ಕೇಂದ್ರಿಯ ವಿದ್ಯಾಲಯಕ್ಕೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ, ಮೂಲಸೌಕರ್ಯಗಳ ವ್ಯವಸ್ಥೆಯನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಬಳಿಕ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ ಕೊರೋನಾ ಸುರಕ್ಷತಾ ನಿಯಮವನ್ನು ಪಾಲಿಸಿ, ಈ ಶೈಕ್ಷಣಿಕ ವರ್ಷದಿಂದ 1 ರಿಂದ 10 ನೇ ತರಗತಿಗಳನ್ನು ಪುನರಾರಂಭಿಸಲು ಸೂಚಿಸಿದರು.
ನಂತರ ಏಪ್ರೀಲ 1 ರೀಂದ ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ದಾಖಲಾತಿ ಅರ್ಜಿ ಸಲ್ಲಿಸಲು ಅನುಮತಿ ನೀಡುವಂತೆ ತಿಳಿಸಿದರು. ಈ ವಿದ್ಯಾಲಯದ ದಾಖಲಾತಿಯನ್ನು ಚಿಕ್ಕೋಡಿ ತಾಲೂಕಿನ ಆರ್ಥಿಕವಾಗಿ ಹಿಂದಿಳಿದ ವರ್ಗದ ಜನರ ಮಕ್ಕಳಿಗೆ ಮತ್ತು ಕೆಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿ ವರ್ಗದ ಮಕ್ಕಳಿಗೆ ಅನುಕೂಲವಾಗಲಿದ್ದು ಸಾರ್ವಜನಿಕರು ಈ ಕೇಂದ್ರಿ ವಿದ್ಯಾಲಯದ ಲಾಭ ಪಡೆದುಕೊಳ್ಳಬೆಕೇಂದು ಹೇಳಿದರು.
ಈ ಸಂಧರ್ಭದಲ್ಲಿ ಚಿಕ್ಕೋಡಿ ತಾಲ್ಲೂಕು ಉಪವಿಭಾಗಾಧಿಕಾರಿಗಳಾದ ಯುಕೇಶ ಕುಮಾರ, ಪ್ರಭಾರಿ ಪ್ರಾಂಶುಪಾಲರಾದ ಸುಧೀರ ಶರ್ಮಾ, ಸಹಾಯಕ ಕಾರ್ಯಕಾರಿ ಅಭಿಯಂತರರಾದ ರಶೀದ, ಗುತ್ತಿಗೆರಾದ ಕೋಟೇಶ್ವರ ರಾವ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ