ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗಡಿ ವಿವಾದದ ಬೆನ್ನಲ್ಲೇ ಡಿಸೆಂಬರ್ 19ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಮತ್ತೊಂದು ಹೋರಾಟದ ಬಿಸಿ ತಟ್ಟಲಿದೆ. ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯ ಕೂಗು ಕೇಳಿಬರುತ್ತಿದ್ದು, ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡದಿದ್ದರೆ ತೆಲಂಗಾಣ ಮಾದರಿಯ ಹೋರಾಟ ನಡೆಸುವುದಾಗಿ ಜಿಲ್ಲಾ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.
ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಬೇಕು ಎಂಬುದು ಈ ಭಾಗದ ಜನರ ದಶಕಗಳ ಬೇಡಿಕೆ. ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಈ ಬಗ್ಗೆ ಯಾವುದೇ ಗಮನ ಹರಿಸುತ್ತಿಲ್ಲ. ತಕ್ಷಣ ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸದಿದ್ದರೆ ತೆಲಂಗಾಣ ಮಾದರಿಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಹೋರಾಟ ಸಮಿತಿ ಸದಸ್ಯರು ತಿಳಿಸಿದ್ದಾರೆ.
ಅಲ್ಲದೇ ಡಿಸೆಂಬರ್ 15ರಂದು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು. ಅಧಿವೇಶನದಲ್ಲಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡುವುದಾಗಿ ಭರವಸೆ ನೀಡಲಿ. ಇಲ್ಲವಾದಲ್ಲಿ ಡಿ.19ರಿಂದ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿರುವ ಅಧಿವೇಶನದ ವೇಳೆ ಪ್ರತಿಭಟನೆ ನಡೆಸುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಅಧಿವೇಶನ ಮುಗಿಯುವವರೆಗೂ ಹೋರಾಟದ ಬಿಸಿ ತಟ್ಟಲಿದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕೋಡಿ, ಅಥಣಿ ಭಾಗದ ಜನರು ಪ್ರತಿಯೊಂದು ಕೆಲಸಕ್ಕೂ ದೂರದ ಬೆಳಗಾವಿ ನಗರಕ್ಕೆ ಅಲೆದಾಡುವ ಪರಿಸ್ಥಿತಿಯಿದೆ. ಜಿಲ್ಲಾ ಕೇಂದ್ರ ಬೆಳಗಾವಿಗೆ ಹೋಗಬೇಕೆಂದರೆ ಒಂದು ದಿನವೇ ಬೇಕು. ಇದರಿಂದ ಸಾಕಷ್ಟು ಸಮಸ್ಯೆಗಳನ್ನು ಜನ ಎದುರಿಸುತ್ತಿದ್ದಾರೆ. ಅಲ್ಲದೇ ಚಿಕ್ಕೋಡಿಯಲ್ಲಿ ಜಿಲ್ಲಾ ಕೇಂದ್ರವಾದರೆ, ಎಸ್ ಪಿ, ಡಿಸಿ ಕಚೇರಿಗಳು ಬಂದರೆ ಗಡಿ ಸಂರಕ್ಷಣೆಗೂ ಅನುಕೂಲವಾಗಲಿದೆ. ಗಡಿ ಭಾಗದಲ್ಲಿ ಕನ್ನಡ ಬೆಳೆಯಲು ಸಾಧ್ಯವಾಗುತ್ತದೆ ಎಂಬುದು ಹೋರಾಟಗಾರರ ಅಭಿಪ್ರಾಯ.
*ಪ್ರಧಾನಿ ಮೋದಿ ಹತ್ಯೆ ಮಾತನಾಡಿದ್ದ ಕಾಂಗ್ರೆಸ್ ನಾಯಕನ ಬಂಧನ*
https://pragati.taskdun.com/congress-leader-raja-pateriaarrestcontroversial-statementpm-narendra-modi/
https://pragati.taskdun.com/bagalakotesonmurderfather/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ