
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿಗೆ ಆಗಮಿಸಿದರೂ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಸುಳಿವೇ ಇಲ್ಲದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಧಾರಾಕಾರ ಮಳೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಪ್ರವಾಹ ಪರಿಸ್ಥಿತಿ ಅವಲೋಕನಕ್ಕಾಗಿ ಖುದ್ದು ಸಿಎಂ ಯಡಿಯೂರಪ್ಪ ಬಂದರೂ ಕೂಡ ಶಾಸಕರ ಪತ್ತೆಯಿಲ್ಲ. ಸ್ಥಳೀಯ ಶಾಸಕರಿಲ್ಲದೇ ಸಿಎಂ ಯಡಿಯೂರಪ್ಪ ಪ್ರವಾಹ ಸಮೀಕ್ಷೆ ನಡೆಸಿದ್ದಾರೆ.
ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಜಾರಕಿಹೊಳಿ ಸಹೋದರರು ಯಡಿಯೂರಪ್ಪ ಜೊತೆಗೆ ಅಂತರ ಕಾಯ್ದುಕೊಂಡರೇ ಎಂಬ ಕುತೂಹಲ ಮೂಡಿದ್ದು, ಜಾರಕಿಹೊಳಿ ಬ್ರದರ್ಸ್ ನಡೆ ಚರ್ಚೆಗೆ ಕಾರಣವಾಗಿದೆ.
ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಬಿ.ಎಸ್.ಯಡಿಯೂರಪ್ಪ ಭರವಸೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ