Kannada NewsLatest

ಶಾಲೆ ಪುನರಾರಂಭಕ್ಕೆ ಮೊದಲ ಆದ್ಯತೆ ಎಂದ ಸಿಎಂ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಶಾಲೆ ಆರಂಭಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹಿಜಾಬ್ ಹಾಗು ಕೇಸರಿ ಶಾಲು ವಿವಾದ ಕೋರ್ಟ್ ನಲ್ಲಿದೆ. ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಶಾಲಾ-ಕಾಲೇಜುಗಳನ್ನು ಆರಂಭಿಸುವಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ ಶಾಲೆಕಾಲೇಜುಗಳನ್ನು ಆರಂಭಿಸಲಾಗುವುದು ಎಂದರು.

ರಾಜ್ಯದಲ್ಲಿ ಶಾಲೆಗಳ ಪುನರಾರಂಭಕ್ಕೆ ಮೊದಲ ಆದ್ಯತೆ ನೀದಲಾಗುವುದು. ಶಾಂತಿ, ಸುವ್ಯವಸ್ಥೆಗೆ ಸರ್ಕಾರ ಕ್ರಮ ಕೈಗೊಳ್ಳಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.

Home add -Advt

ಬೆಳಗಾವಿಯ 754 ಎಕರೆ ಜಮೀನು ಶೀಘ್ರ ರಾಜ್ಯ ಸರಕಾರದ ವಶಕ್ಕೆ – ಸಿಎಂ ಬೊಮ್ಮಾಯಿ ವಿಶ್ವಾಸ
ಮಾತನಾಡುತ್ತ ಇದ್ದಕ್ಕಿದ್ದಂತೆ ಭಾವುಕರಾಗಿ ಕಣ್ಣೀರಿಟ್ಟ ಸ್ಪೀಕರ್ ಕಾಗೇರಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button