Kannada NewsLatest

ಬೆಳಗಾವಿ: ಕಾಲೇಜು ಬಸ್ ಗೆ ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ; ವಿದ್ಯಾರ್ಥಿಗಳು ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿದ್ಯಾರ್ಥಿಗಳನ್ನು ಬಸ್ ಗೆ ಹತ್ತಿಸಿಕೊಳ್ಳುತ್ತಿದ್ದ ವೇಳೆ ಕಾಲೇಜು ಬಸ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಜತ್-ಜಾಂಬೋಟಿ ರಸ್ತೆಯ ಗುರ್ಲಾಪುರ ಗ್ರಾಮದ ಬಳಿ ನಡೆದಿದೆ.

ಖಾಸಗಿ ಕಾಲೇಜು ಬಸ್ ವಿದ್ಯಾರ್ಥಿಗಳನ್ನು ಬಸ್ ಗೆ ಹತ್ತಿಸಲು ರಸ್ತೆ ಬದಿ ನಿಂತಿತ್ತು. ಈ ವೇಳೆ ವೇಗವಾಗಿ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಲೇಜು ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 10 ವಿದ್ಯಾರ್ಥಿಗಳು ಹಾಗೂ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ

Home add -Advt

ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ಪತ್ನಿಗೆ ಕಿರುಕುಳ; PSI ಪತಿ ವಿರುದ್ಧ ಎಫ್ ಐ ಆರ್ ದಾಖಲು; ಹೆಂಡತಿ ವಿರುದ್ಧವೂ ದೂರು ದಾಖಲಿಸಿದ ಪೊಲೀಸ್ ಅಧಿಕಾರಿ

ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ

Related Articles

Back to top button