Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ದಾಕ್ಷಾಯಿಣಿ ಚೌಶೆಟ್ಟಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

25 ಸಾವಿರರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಮಹಿಳಾ ಅಧಿಕಾರಿ ದಾಕ್ಷಾಯಿಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ನಿರಂಜನ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದೆ.

Home add -Advt

ಬೆಳಗಾವಿಯ ವಿಕಾಸ ಪ್ರಮೋದ ಕೋಕಣೆ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸಿ ಫಾರ್ಮ್ ಸಲ್ಲಿಸದ ಹಿನ್ನೆಲೆಯಲ್ಲಿ ಇಲಾಖೆಯಿಂದ ಸೀಸರ್ ನೋಟಿಸ್ ಪಡೆದಿದ್ದ ದೂರುದಾರ ವಿಕಾಸ್ ಕೋಕಣೆ 41 ಸಾವಿರ ರೂಪಾಯಿ ಹಣ ಕಟ್ಟಿದ್ದರು. ನಂತರ ಸದರಿ ಸಿ ಫಾರ್ಮ್ ಸ್ಟೇಟ್ ಜಿ ಎಸ್ ಟಿ ಇಲಾಖೆಗೆ ಸಲ್ಲಿಸಿದ ಬಳಿಕ 41 ಸಾವಿರ ರೂಪಾಯಿ ಹಣ ಮರಳಿ ಪಡೆಯಲು ದೂರುದಾರನ ಬಳಿ ಮಹಿಳಾ ಅಧಿಕಾರಿ 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ವಿಕಾಸ್ ಕೋಕಣೆ ಅವರಿಂದ ಹಣ ಪಡೆಯುತ್ತಿದ್ದಾಗಲೇ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಮಹಿಳಾ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.


Related Articles

Back to top button