
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಸಲೀಲೆ ಸಿಡಿ ಪ್ರಕರಣ ಬಯಲು ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಬೆಳಗಾವಿಯ ಕಾಂಗ್ರೆಸ್ ಕಚೇರಿಯಿಂದ ಚನ್ನಮ್ಮ ವೃತ್ತದವರೆಗೆ ರ್ಯಾಲಿ ನಡೆಸಿದ ಕಾರ್ಯಕರ್ತರು ಯುವತಿಗೆ ನೌಕರಿಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿರುವ ರಮೇಶ್ ಜಾರಕಿಹೊಳಿ ವಿರುದ್ಧ ಧಿಕ್ಕಾರ ಕೀಗಿದರು. ತಕ್ಷಣ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪಂಚರಾಜ್ಯಗಳ ಚುನಾವಣೆ, ಬೆಳಗಾವಿ ಲೋಕಸಭಾ ಉಪಚುನಾವಣೆ, 3 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಹಾಗೂ ರಾಜ್ಯಾದ್ಯಂತ ವಿಪಕ್ಷಗಳ ಪ್ರತಿಭಟನೆ ಬೆನ್ನಲ್ಲೇ ಒತ್ತಡಕ್ಕೆ ಮಣಿದ ರಮೇಶ್ ಜಾರಕಿಹೊಳಿ ಇದೀಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ