Kannada NewsLatest

ಕಾಂಗ್ರೆಸ್ ಭವನದಲ್ಲಿ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಸ್ವಾತಂತ್ರ್ಯಕ್ಕಾಗಿ ಹಿಂಸಾತ್ಮಕ ಹೋರಾಟ ನಡೆಯುತ್ತಿದ್ದ ಸಂದರ್ಭದಲ್ಲಿ ಅಹಿಂಸೆಯ ಹೋರಾಟದ ಮೂಲಕವೇ ಸ್ವಾತಂತ್ರ್ಯ ತಂದುಕೊಡಬಹುದೆಂಬುದನ್ನು ತೋರಿಸಿದ ಅದಮ್ಯ ಚೇತನ ಮಹಾತ್ಮಾ ಗಾಂಧೀಜಿ ಎಂದು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಬೆಳಗಾವಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲಬಹಾದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಅಂಗವಾಗಿ, ಈ ಮಹಾನುಭಾವರ ಭಾವ ಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಲಾಲಬಹಾದ್ದೂರ್ ಶಾಸ್ತ್ರಿ, ಮಹಾತ್ಮಾ ಗಾಂಧೀಜಿ ಮೊದಲಾದ ಅನೇಕ ಮಹನೀಯರ ತ್ಯಾಗ ಬಲಿದಾನಗಳ ಫಲವಾಗಿ ನಾವಿಂದು ಸ್ವಾತಂತ್ರ್ಯದ ಬದುಕು ಅನುಭವಿಸುತ್ತಿದ್ದೇವೆ. ಇಂಥಹ ಮಹನೀಯರ ತ್ಯಾಗ ಬಲಿದಾನಗಳು ವ್ಯರ್ಥವಾಗದಂತೆ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ದೇಶ ಅಭಿವೃದ್ಧಿ ಹೊಂದಬೇಕಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಪ್ರದೀಪ ಎಂ. ಜೆ. ವಿಜಯ ಹುಣಶ್ಯಾಳ, ಕಲ್ಪನಾ ಜೋಶಿ, ವಿಜಯ ಗೆಜ್ಜಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

https://pragati.taskdun.com/politics/lakshmi-hebbalkargandhi-jayantikhadi-gramodyoga-kendrabadanalu/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button