ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಾಡೆಸಿರುವ ರಾಜ್ಯ ಕಾಂಗ್ರೆಸ್, ಕುಂದಾನಗರಿ ಬೆಳಗಾವಿಯಿಂದಲೇ ಬಸ್ ಯಾತ್ರೆ ಆರಂಭ ಮಾಡುವುದಾಗಿ ಘೋಷಿಸಿದೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖಂಡರು ಕೈಗೊಳ್ಳುವ ಯಾತ್ರೆ, ಕೃಷ್ಣಾ, ಮಹದಾಯಿ ಯೋಜನೆಯಲ್ಲಿ ರಾಜ್ಯ ಸರಕಾರದ ವೈಫಲ್ಯದ ಬಗ್ಗೆ ಹಮ್ಮಿಕೊಂಡಿರುವ ಸಮಾವೇಶ ಕುರಿತು ಕಾಂಗ್ರೆಸ್ ನಾಯಕರು ಸೋಮವಾರ ಪೂರ್ವಭಾವಿ ಸಭೆ ನಡೆಸಿದರು.
ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಸತೀಶ್ ಜಾರಕಿಹೊಳಿ, ಮಾಜಿ ಸಚಿವ, ಹಿರಿಯ ಮುಖಂಡ ಎಚ್ ಕೆ ಪಾಟೀಲ್ ಮತ್ತಿತರರು ಭಾಗವಹಿಸಿದ್ದರು.
ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬೆಳಗಾವಿಯಿಂದ ಬಸ್ ಯಾತ್ರೆ ಆರಂಭಿಸುತ್ತೇವೆ ಎಂದು ತಿಳಿಸಿದರು. ಕಾರಣ ಮಹಾತ್ಮಾ ಗಾಂಧಿಜೀಯವರು ಕಾಂಗ್ರೆಸ್ ಅಧ್ಯಕ್ಷರಾಗಿ ಬೆಳಗಾವಿಯಿಂದ ಜವಾಬ್ದಾರಿ ತೆಗೆದುಕೊಂಡರು. ಎಐಸಿಸಿ ಅಧಿವೇಶನ ನಡೆಯಿತು. ಇಡೀ ದೇಶಕ್ಕೆ ಸ್ವಾತಂತ್ರ್ಯ ತಂದ ಇತಿಹಾಸ ಬೆಳಗಾವಿಗಿದೆ. ಮತ್ತೆ ಈ ರಾಜ್ಯದಲ್ಲಿ ಜನಪರ ಸರ್ಕಾರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಇಲ್ಲಿಂದಲೇ ಬಸ್ ಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದರು.
ಜನವರಿ 10 ಹಾಗೂ 11ರಂದು ಬೆಳಗಾವಿ ನಗರ ಹಾಗೂ ಚಿಕ್ಕೋಡಿಯಲ್ಲಿ ಜಿಲ್ಲಾ ಮಟ್ಟದ ಎರಡು ಸಭೆಗಳನ್ನು ನಡೆಸಲಾಗುವುದು ಎಂದು ವಿವರಿಸಿದರು.
*ತೊಂದರೆ ಕೊಡಬೇಕೆಂದು ತೀರ್ಮಾನಿಸಿದ್ದಾರೆ; ಯಾವುದಕ್ಕೂ ಹೆದರಲ್ಲ ಎಂದ ಡಿ.ಕೆ.ಶಿವಕುಮಾರ್*
https://pragati.taskdun.com/d-k-shivakumarpressmeetbelagavicbi-raid/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ